

ಹುಬ್ಬಳ್ಳಿ: ಶಿರಸಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕರೊಬ್ಬರ ಬ್ಯಾಗ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳಿಯನ್ನು ಬಂಧಿಸುವಲ್ಲಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಛಬ್ಬಿ ಗ್ರಾಮದ ಮಹಾದೇವಿ ವಡ್ಡರ್ ಬಂಧಿತ ಮಹಿಳೆ. ಕಳ್ಳತನವಾಗಿದ್ದ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 7000ರೂ. ನಗದ, ಮೊಬೈಲ್ ಫೋನ್ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿತಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣ ಭೇದಿಸಲು ಹಳೇ ಹುಬ್ಬಳ್ಳಿ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಎಸ್.ಎಚ್. ಯಳ್ಳೂರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.