ಬಿಡಾಡಿ ದನಗಳ ಜೀವಕ್ಕೆ ಕಂಟಕ

ಸಿಂಧನೂರಿನ ಹಳೇ ಬಜಾರ್ ರಸ್ತೆ ಬದಿ ಬಿಸಾಡಿದ ಪ್ಲಾಸ್ಟಿಕ್ ತ್ಯಾಜ್ಯ ತಿನ್ನುತ್ತಿರುವ ದನಗಳು.
ಸಿಂಧನೂರಿನ ಹಳೇ ಬಜಾರ್ ರಸ್ತೆ ಬದಿ ಬಿಸಾಡಿದ ಪ್ಲಾಸ್ಟಿಕ್ ತ್ಯಾಜ್ಯ ತಿನ್ನುತ್ತಿರುವ ದನಗಳು.
Published on

ಸಿಂಧನೂರು: ನಗರದ ವಿವಿಧೆಡೆ ಪ್ಲಾಸ್ಟಿಕ್ ತ್ಯಾಜ್ಯ ಎಲ್ಲೆಂದರಲ್ಲಿ ಬಿಸಾಡಿ ಪರಿಸರ ಮಾಲಿನ್ಯ ಮಾಡಲಾಗುತ್ತಿದೆ. ಅಲ್ಲದೆ ಬಿಡಾಡಿ ದನಗಳು, ನಾಯಿ, ಹಂದಿಗಳ ಜೀವಕ್ಕೂ ಕಂಟಕವಾಗಿ ಪರಿಣಮಿಸಿವೆ.

ನಗರದಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಊಟಕ್ಕೆ ಪ್ಲಾಸ್ಟಿಕ್ ತಟ್ಟೆಗಳನ್ನು ಬಳಸಿ ಸುರಕ್ಷಿತ ಸ್ಥಳದಲ್ಲಿ ಸುಡಬೇಕು ಎಂಬ ನಿಯಮವಿದೆ. ಈ ವಿಷಯ ತಿಳಿದವರೇ ಊಟದ ತಟ್ಟೆ ಹಾಗೂ ತ್ಯಾಜ್ಯ ಮಿಶ್ರಿತ ಅನ್ನವನ್ನು ರಸ್ತೆ ಬದಿಯಲ್ಲಿ ಬಿಸಾಡುತ್ತಾರೆ. ಇದು ದುರ್ವಾಸನೆ ಜತೆ ಪರಿಸರ ಮಾಲಿನ್ಯಕ್ಕೂ ಕಾರಣವಾಗಿದೆ. ತ್ಯಾಜ್ಯ ತಿಂದು ಹಲವು ಜಾನುವಾರುಗಳು ಸತ್ತಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡುತ್ತಿಲ್ಲ. ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಕುರಿತು ನಗರಸಭೆ ಪ್ರಭಾರ ಪೌರಾಯುಕ್ತೆ ಕೆ.ಶ್ರುತಿ ಪ್ರತಿಕ್ರಿಯಿಸಿ, ನಗರಸಭೆಯಿಂದ ಸ್ವಚ್ಛತೆ ಮತ್ತು ಪರಿಸರ ಮಾಲಿನ್ಯ ತಡೆಗಟ್ಟಲು ಶ್ರಮಿಸಲಾಗುತ್ತಿದೆ. ಸ್ವಚ್ಛ ಭಾರತ್ ಪರಿಕಲ್ಪನೆ ಬಗ್ಗೆ ಜಾಗೃತಿ ಮೂಡಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಊಟದ ತಟ್ಟೆಯನ್ನು ಎಲ್ಲೆಂದರಲ್ಲಿ ಬಿಸಾಡಿದವರಿಗೆ ಈ ಹಿಂದೆ ಅಧಿಕಾರಿಗಳು ನೋಟಿಸ್ ನೀಡಿದ್ದು, ಮುಂದಿನ ದಿನಗಳಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net