

ಬಾಗಲಕೋಟೆ: ಜಲ್ಲಿಕಲ್ಲು ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿಯಾಗಿ ವಕೀಲ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ತಾಲೂಕಿನ ಸೀಗಿಕೇರಿ ಕ್ರಾಸ್ನಲ್ಲಿ ಸೋಮವಾರ ಸಂಭವಿಸಿದೆ.
ಗುಳೇದಗುಡ್ಡ ತಾಲೂಕಿನ ತಿಮ್ಮಸಾಗರ ಗ್ರಾಮದ ವಕೀಲ ಸಂಗಪ್ಪ ಅಂಗಡಿ(42) ಮತ್ತು ಸೀಗಿಕೇರಿ ಗ್ರಾಮದ ಶಂಕ್ರಯ್ಯ ಮಠದ ಮೃತ ದುರ್ದೈವಿಗಳು. ಇವರಿಬ್ಬರೂ ಪ್ರತ್ಯೇಕ ಬೈಕ್ಗಳಲ್ಲಿ ಹೋಗುತ್ತಿದ್ದರು. ಪಕ್ಕದಲ್ಲೇ ಹೋಗುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಜೆಲ್ಲಿಕಲ್ಲು ಬೈಕ್ ಸವಾರರ ಮೇಲೆ ಬಿದ್ದಿದೆ. ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು.