ಇನ್ಮುಂದೆ ಪೊಲೀಸರು ರಸ್ತೆಯಲ್ಲಿ ವಾಹನಗಳಿಗೆ ಅಡ್ಡ ಹಾಕೋಲ್ಲ!

trafic police
Published on

ಬೆಂಗಳೂರು: ಇನ್ಮುಂದೆ ಪೊಲೀಸರು ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳಿಗೆ ಅಡ್ಡ ಹಾಕೋಲ್ಲ! ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಚಾಲಕ ಮತ್ತು ಸವಾರರಿಂದ ದಂಡ ವಸೂಲಿ ಮಾಡಲು ಸಂಚಾರ ಪೊಲೀಸರು ರಸ್ತೆಗಳ ಬದಲು ಇನ್ಮುಂದೆ ಆರ್​ಟಿಒ ಕಚೇರಿ ಮುಂದೆ ಕಾರ್ಯಾಚರಣೆ ನಡೆಸಲಿದ್ದಾರೆ.

ರಸ್ತೆಗಳಲ್ಲಿ ವಾಹನಗಳನ್ನು ತಡೆದು ಹಳೇ ಪ್ರಕರಣಗಳ ಪರಿಶೀಲನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದರಿಂದ ಈ ಹೊಸ ಮಾದರಿ ಅಳವಡಿಕೆಗೆ ಪೊಲೀಸ್​ ಇಲಾಖೆ ತೀರ್ಮಾನಿಸಿದೆ.

ಪ್ರತಿ ಆರ್​ಟಿಒ ಕಚೇರಿ ಮುಂದೆ ಎಸ್​ಐ, ಎಎಸ್​ಐ ಹಾಜರಾಗಿ ಡಿಎಲ್​, ಫಿಟ್​ನೆಸ್​ ಸರ್ಟಿಫಿಕೇಟ್​, ವಾಹನ ನೋಂದಣಿ, ಡಿಎಲ್​ ನವೀಕೃತ ಸೇರಿ ಇತರ ಕೆಲಸಕ್ಕೆ ಬರುವ ವಾಹನ ಸವಾರರ ಮತ್ತು ಚಾಲಕರು ಪಾವತಿಸಬೇಕಿರುವ ದಂಡವನ್ನು ವಸೂಲಿ ಮಾಡುವ ಯೋಜನೆ ರೂಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net