ರಸ್ತೆ ಬದಿಗೆ ಸರಿದ ಸಾರಿಗೆ ಬಸ್

IMG-20240718-WA0271
Published on

ಆಲೂರು: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಸರಿದಿದೆ.

ಆಲೂರಿನಿಂದ ಪುರಭೈರವನಹಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭ ಮಣಿಗನಹಳ್ಳಿ ಗ್ರಾಮದ ಬಳಿ ಗುರುವಾರ ಘಟನೆ ನಡೆದಿದೆ. ನಂತರ ಪ್ರಯಾಣಿಕರನ್ನು ಬೇರೆ ವಾಹನದಲ್ಲಿ ಕಳುಹಿಸಿಕೊಡಲಾಯಿತು. ಸ್ಥಳಕ್ಕೆ ಆಲೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net