

ಸುಂಟಿಕೊಪ್ಪ: ಪನ್ಯ ನಿವಾಸಿ ಸುಂದರ(ಬೇಡು) ಅವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬ ಮುರಿದು ಬಿದ್ದು ಹಾನಿಯಾಗಿದೆ.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಪ್ರಸಾದ್ ಕುಟ್ಟಪ್ಪ, ಆಲಿಕುಟ್ಟಿ ಸ್ಥಳಕ್ಕೆ ತೆರಳಿ ತಾತ್ಕಾಲಿಕ ನೆರವು ನೀಡಿದ್ದಾರೆ.
ಪನ್ಯ ಸಮೀಪದ ಸ್ವಸ್ಥ ಶಾಲೆಯ ಸಮೀಪದ ನಿವಾಸಿ ಆಲ್ಪೆರ್ಡ್ ಡಿಸೋಜ ಎಂಬವರ ಮನೆಯ ಮೇಲೆ ಮರದ ಕೊಂಬೆ ಮುರಿದು ಬಿದ್ದಿದೆ. ಅಲ್ಲದೆ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಭತ್ತದ ಗದ್ದೆಗಳು ಜಲಾವೃತಗೊಂಡಿದ್ದು ಜನರು ಸಮಸ್ಯೆ ಎದುರಿಸುತ್ತಿದ್ದಾರೆ.