ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಮನೆ ಮೇಲೆ ಮರ ಬಿದ್ದು ಅಪಾರ ಹಾನಿ
Published on

ಸಿದ್ದಾಪುರ: ಭಾರಿ ಗಾಳಿ-ಮಳೆಗೆ ವಿರಾಜಪೇಟೆ ತಾಲೂಕಿನ ಚೆನ್ನಂಗಿ ಗ್ರಾಮದ ಪಿ.ಎಂ.ಮುಸ್ತಫ ಅವರ ಮನೆ ಮೇಲೆ ಮರ ಬಿದ್ದು ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.

ಶುಕ್ರವಾರ ಬೆಳಗ್ಗೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಮನೆ ಹಾಗೂ ಕೊಟ್ಟಿಗೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯೊಳಗೆ ಮಲಗಿದ್ದ ಸಬಿಲ್, ಫಾಝಿಲ್ ಹಾಗೂ ಉಸ್ಮಾನ್ ಗಾಯಗೊಂಡಿದ್ದಾರೆ. ಗಾಯಾಳು ಸಿದ್ದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಗೃಹೋಪಯೋಗಿ ವಸ್ತುಗಳಿಗೆ ಹಾನಿ ಉಂಟಾಗಿದೆ.
ಘಟನಾ ಸ್ಥಳಕ್ಕೆ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರುಣ್ ಕುಮಾರ್, ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net