ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತೆರಳುತ್ತಿದ್ದ ದಾರೀಲಿ ಎದುರಾಗಿತ್ತೊಂದು ಕಂಟಕ..!

tree
Published on

ಉತ್ತರಕನ್ನಡ: ಕರೊನಾ ಸೋಂಕಿನ ಭೀತಿ ನಡುವೆಯೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲೆಂದು ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಮಾರ್ಗ ಮಧ್ಯೆ ಮತ್ತೊಂದು ಸಮಸ್ಯೆ ಎದುರಾಗಿ ಆತಂಕ ತಂದೊಡ್ಡಿತ್ತು.

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಕರೆದೊಯ್ಯಲಾಗುತ್ತಿತ್ತು. ಯಾಣ ರಸ್ತೆಯ ಮಾರ್ಗದಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರವೊಂದು ಬಿದ್ದಿತ್ತು. ಹಾಗಾಗಿ ಬಸ್​ ಅನ್ನು ಅಲ್ಲೇ ನಿಲ್ಲಿಸಿದ್ದರಿಂದ ವಿದ್ಯಾರ್ಥಿಗಳು ಭಯಗೊಂಡಿದ್ದರು. ಈ ವೇಳೆ ಸಮಯಪ್ರಜ್ಞೆ ಮೆರೆಯುವ ಮೂಲಕ ಡ್ರೈವರ್ ಮತ್ತು ಕಂಡಕ್ಟರ್ ಮಕ್ಕಳ ಆತಂಕ ದೂರ ಮಾಡಿದರು. ಇದನ್ನೂ ಓದಿರಿ ಆಂಬುಲೆನ್ಸ್​ನಲ್ಲೇ ಹೆರಿಗೆ

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದ ರಂಬೆ-ಕೊಂಬೆಗಳನ್ನು ಚಾಲಕ ಮತ್ತು ನಿರ್ವಾಹಕ ಇಬ್ಬರೇ ಪ್ರಯಾಸಪಟ್ಟು ತೆರವುಗೊಳಿಸಿದರು. ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದರು. ಇವರ ಕಾರ್ಯಕ್ಕೆ ವಿದ್ಯಾರ್ಥಿಗಳು ಮತ್ತು ಪಾಲಕರು ಕೃತಜ್ಞತೆ ಸಲ್ಲಿಸಿದ್ದಾರೆ.

ಕೆಎಸ್​ಆರ್​ಟಿಸಿ ಸಿಬ್ಬಂದಿಯ ಕಾರ್ಯಕ್ಕೆ ಮುಚ್ಚುಗೆ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್​, ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. 'ಉತ್ತರ ಕನ್ನಡ ಜಿಲ್ಲೆಯ ಯಾಣ ಮತ್ತು ಕುಮಟಾ ರಸ್ತೆಯಲ್ಲಿ ಮರ ಬಿದ್ದು ರಸ್ತೆ ಬಂದಾಗಿತ್ತು. ಕೆಎಸ್​ಆರ್​ಟಿಸಿ ಸಿಬ್ಬಂದಿಗಳ ಶ್ರಮದಿಂದ ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರ ತಲುಪಿದ್ದಾರೆ' ಎಂದು ಹೇಳಿಕೊಂಡಿರುವ ಸಚಿವರು, ಸಿಬ್ಬಂದಿ ಮರ ತೆರವು ಮಾಡುತ್ತಿದ್ದ ಫೋಟೋಗಳನ್ನೂ ಶೇರ್​ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net