ಬೊಳ್ಳಜಿರ ಬಿ.ಅಯ್ಯಪ್ಪಗೆ ಸನ್ಮಾನ

2adarshkdga5
Published on

ಮಡಿಕೇರಿ: ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವತಿಯಿಂದ ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರನ್ನು ಸನ್ಮಾನಿಸಲಾಯಿತು.


ಕೊಡವ ಮಕ್ಕಡ ಕೂಟದ ವತಿಯಿಂದ ಕೊಡವ ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪುಸ್ತಕ ಪ್ರಕಟಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿರುವ ಸಲುವಾಗಿ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ನಡೆದ ವಿಶ್ವ ಕೊಡವ ಸಮ್ಮೇಳನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಅಧ್ಯಕ್ಷ ಶಾಂತೆಯಂಡ ನಿರನ್ ನಾಚಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಗ್ರೀನ್ ಸಿಟಿ ಫೋರಂ ನಿರ್ದೇಶಕ ಕುಕ್ಕೇರ ಜಯ ಚಿಣ್ಣಪ್ಪ, ತಲಕಾವೇರಿ ಮತ್ತು ಭಾಗಮಂಡಲ ದೇವಾಲಯದ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಟಂಡ ಎಸ್.ತಮ್ಮಯ್ಯ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net