ತುಮಕೂರಿನ ಶಿರಾದಲ್ಲಿ ಭೀಕರ ಅಪಘಾತ: ಕಣ್ಣು ದಾನ ಮಾಡಿ ಸಾವಲ್ಲೂ ಸಾರ್ಥಕತೆ

New Project(4)
Published on

ತುಮಕೂರು: ಕೂಲಿ ಕೆಲಸಕ್ಕಾಗಿ ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ತೆರಳುತ್ತಿದ್ದವರು ಮಾರ್ಗಮಧ್ಯೆ ಅಪಘಾತದಲ್ಲಿ ದುರಂತ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಇಂದು(ಗುರುವಾರ) ಬೆಳಗ್ಗೆ ಸಂಭವಿಸಿದೆ. ಮೃತರ ಸಂಖ್ಯೆ 10ಕ್ಕೇರಿದ್ದು, ಈ ಪೈಕಿ ಒಂದೇ ಕುಟುಂಬದ ನಾಲ್ವರು ಸೇರಿದ್ದಾರೆ. ನೋವಿನಲ್ಲೂ ಕುಟುಂಬಸ್ಥರು ಮೃತರ ಕಣ್ಣುಗಳನ್ನು ದಾನ ಮಾಡಿದ್ದು, ಮನಕಲಕುತ್ತೆ.

ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಈ ಪೈಕಿ ಇಬ್ಬರು ಮಕ್ಕಳು. ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ಕೂಲಿ ಕೆಲಸ ಅರಸಿ ಕ್ರೂಸರ್​ ವಾಹನದಲ್ಲಿ ಗುಳೆ ಹೊರಟ್ಟಿದ್ದರು. ಮಾರ್ಗಮಧ್ಯೆ ಕ್ರೂಸರ್​ ಮತ್ತು ಲಾರಿ ನಡುವೆ ಭೀಕರ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟರು. ಇನ್ನೊಬ್ಬರು ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈ ಪೈಕಿ 6 ಜನರ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆಯಲಾಗಿದೆ.

ಸುಜಾತ, ಮೀನಾಕ್ಷಿ, ಮೂರು ವರ್ಷದ ಮಗು ವಿನೋದ್ ಮತ್ತು ಕೃಷ್ಣಪ್ಪ, ಪ್ರಭು, ಸಿದ್ದಾರ್ಥ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ಇದರಲ್ಲಿ ಒಂದೇ ಕುಟುಂಬದ ಮೂವರು ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net