ಗೃಹಣಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್

Soni
Published on

ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿರುವ ಸಂತೋಷ ಸರೋವರ್ ಲಾಡ್ಜ್‌ನಲ್ಲಿ ಗೃಹಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿರುವುದು ಬೆಳಕಿಗೆ ಬಂದಿದೆ.
ಲಾಡ್ಜ್‌ನ ಕೊಠಡಿಯಲ್ಲಿ ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಉತ್ತರ ಪ್ರದೇಶ ಮೂಲದ ಸೋನಿ(23) ಡಿ.13ರಂದು ಪತ್ತೆಯಾಗಿದ್ದಳು. 20 ದಿನಗಳ ಹಿಂದೆ ಗಂಡು ಮಗುವಿಗೆ ಜನನ ನೀಡಿದ್ದ ಸೋನಿ ಸಿಜೇರಿಯನ್ ನೋವು ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪತಿ ಅವಿನಾಶ್ ಕಥೆ ಕಟ್ಟಿದ್ದ.
ಲಾಡ್ಜ್‌ನಲ್ಲಿ ಸಿಹಿ ತಿಂಡಿ ಮಾಡುವ ಕೆಲಸ ಮಾಡುತ್ತಿದ್ದ ಅವಿನಾಶ ಸೋನಿ ಮಗುವಿಗೆ ಜನನ ನೀಡಿದ ನಂತರ ಮಗುವಿನ ಅಳುವಿನಿಂದ ಸಿಡುಕುತ್ತಿದ್ದ. ಜತೆಗೆ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದ. ಇದರಿಂದಾಗಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ್ಯಾನ್‌ಗೆ ನೇಣು ಹಾಕಿ ಆತ್ಮಹತ್ಯೆ ಎಂದು ಬಿಂಬಿಸಿದ್ದ.
ಮೊದಲು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದ ಪಶ್ಚಿಮ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸಿದ ವೇಳೆ ಪತಿ ಅವಿನಾಶನನ್ನು ವಿಚಾರಣೆ ನಡೆಸಿದ ವೇಳೆ ಸತ್ಯಾಂಶ ಹೊರಬಂದಿದ್ದು, ಈಗ ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಪ್ರಕ್ರಿಯೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net