ಮಳೆ ನೀರಲ್ಲಿ ಕೊಚ್ಚಿಹೋದ ಇಬ್ಬರು ಪೊಲೀಸ್​ ಪೇದೆಗಳು: ತಡರಾತ್ರಿ ಡ್ಯೂಟಿ ಮುಗಿಸಿ ವಾಪಸ್​ ಬರುವಾಗ ಅವಘಡ

New Project(1)
Published on

ಕೊಪ್ಪಳ: ಪೊಲೀಸ್​ ಕಾನ್​ಸ್ಟೇಬಲ್​ಗಳಿಬ್ಬರು ಮಳೆ ನೀರಲ್ಲಿ ಕೊಚ್ಚಿ ಹೋದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ಸಂಭವಿಸಿದೆ.

ಬಂಡಿಹಾಳ‌ ಗ್ರಾಮ ಹೊರವಲಯದಲ್ಲಿ ಸೋಮವಾರ ತಡರಾತ್ರಿ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯ ಪೇದೆಗಳಾದ ಮಹೇಶ್ ಮತ್ತು ನಿಂಗಪ್ಪ ನೀರಲ್ಲಿ ಕೊಚ್ಚಿಹೋಗಿದ್ದಾರೆ. ಇವರಿಬ್ಬರೂ ರೈತರ ಪ್ರತಿಭಟನೆ ಹಿನ್ನೆಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​ಗೆಂದು ತೆರಳಿದ್ದರು.

ಸೋಮವಾರ ರಾತ್ರಿ ವಾಪಸ್​ ಬರುವಾಗ ಬಂಡಿಹಾಳ‌ ಗ್ರಾಮ ಹೊರವಲಯದಲ್ಲಿ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net