

ಉಡುಪಿ: ನಾಡಕೋವಿಯಿಂದ ಎದೆಗೆ ಗುಂಡು ಹಾರಿಸಿಕೊಂಡು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ನಿಲೆಬೆಟ್ಟು ಗುತ್ತು ಮನೆ ಭಾಸ್ಕರ್ ಹೆಗ್ಡೆ(63) ಆತ್ಮಹತ್ಯೆ ಮಾಡಿಕೊಂಡವರು. ದುರ್ಗಾ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಭಾಸ್ಕರ್ ಹೆಗ್ಡೆ, ಸಾವಯವ ಕೃಷಿಕರಾಗಿಯೂ ಹೆಸರು ಮಾಡಿದ್ದರು. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.
ಇಂದು ಬೆಳಗಿನಜಾ ಮನೆಯಲ್ಲೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಆರ್ಥಿಕ ಸಮಸ್ಯೆಯೇ ಕಾರಣ ಎನ್ನಲಾಗಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.