ಬೆಲ್ಲದ ಬಾಗೇವಾಡಿಯತ್ತ ಉಮೇಶ್​ ಕತ್ತಿ ಅಂತಿಮ ಯಾತ್ರೆ

New Project(8)
Published on

ಬೆಳಗಾವಿ: ಸಚಿವ ಉಮೇಶ್​ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬೆಳಗಾವಿಗೆ ತರಲಾಗಿದ್ದು, ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಲ್ಲದ ಬಾಗೇವಾಡಿಗೆ ಅಂತಿಮ ಯಾತ್ರೆ ಹೊರಟಿದೆ.

ಉಮೇಶ ಕತ್ತಿ ಅವರ ಪಾರ್ಥಿವ ಶರೀರವನ್ನು ತರುತ್ತಿದ್ದಂತೆ ಕತ್ತಿ ಅಭಿಮಾನಿಗಳು ಹಾಗೂ ಬೆಂಬಲಿಗರ ಆಕ್ರಂದನ ಮುಗಿಲು ಮುಟ್ಟಿತ್ತು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಸಹಸ್ರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆದರು. 'ಅಮರ ರಹೇ, ಅಮರ ರಹೇ, ಉಮೇಶ ಕತ್ತಿ ಅಮರ ರಹೇ' ಘೋಷಣೆ ಮೊಳಗಿತ್ತು. ವಿಮಾನ ನಿಲ್ದಾಣ ಪ್ರಾಂಗಣದಲ್ಲಿ ಜನಸ್ತೋಮವೇ ಸೇರಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಸೇನಾ ವಾಹನದಲ್ಲಿ ಉಮೇಶ್​ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net