ಉಮೇಶ್​ ಕತ್ತಿ ನಿಧನಕ್ಕೆ ಪ್ರಧಾನಿ ಸಂತಾಪ

umesh katti
Published on

ಬೆಂಗಳೂರು: ರಾಜ್ಯದ ಹಿರಿಯ ಶಾಸಕ, ಆಹಾರ ಖಾತೆ ಸಚಿವ ಉಮೇಶ್​ ಕತ್ತಿ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ತೀವ್ರ ಹೃದಯಾಘಾತದಿಂದ ಉಮೇಶ್​ ಕತ್ತಿ ಅವರು ಮಂಗಳವಾರ ರಾತ್ರಿ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

'ಕರ್ನಾಟಕದ ಅಭಿವೃದ್ಧಿಗೆ ಉಮೇಶ್​ ಕತ್ತಿ ಜೀ ಅವರು ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ಅನುಭವಿ ನಾಯಕರಾಗಿದ್ದ ಉಮೇಶ್​ ಕತ್ತಿ ಜೀ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಅವರ ಕುಟುಂಬಕ್ಕೆ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ' ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net