ಕೇಂದ್ರ ಒಬಿಸಿ ಪಟ್ಟಿಗೆ ಸೇರ್ಪಡೆ ಒತ್ತಾಯಿಸಿ ವೀರಶೈವ ಲಿಂಗಾಯತ ಸಮುದಾಯ ಪ್ರತಿಭಟನೆ

New Project(4)
Published on

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಕೇಂದ್ರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಸೋಮವಾರ ಪ್ರತಿಭಟನೆ ನಡೆಸಿದೆ.

ರಾಜ್ಯದ ವಿವಿಧ ಭಾಗಗಳಿಂದ ಸಮುದಾಯದ ಸಹಸ್ರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಒಬಿಸಿ ಸ್ಥಾನ ನಮ್ಮ ಸಮುದಾಯದ ಹಕ್ಕು, ವೀರಶೈವ ಲಿಂಗಾಯತ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ, ನಮ್ಮ ಹಕ್ಕು ನಮ್ಮ ಹೋರಾಟ ಹಾಗೂ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಎಂಬ ಫಲಕಗಳನ್ನು ಪ್ರದರ್ಶಿಸಿ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

60 ವರ್ಷಗಳಿಂದ ಈ ಸಮುದಾಯ ರಾಜ್ಯದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ್ದರೂ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಿಲ್ಲ. ಸರ್ಕಾರ ಕೂಡಲೇ ನಮ್ಮ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದಾಗಿ ಮಹಾಸಭಾದ ಕರ್ನಾಟಕ ಘಟಕ ಅಧ್ಯಕ್ಷ ಎನ್. ತಿಪ್ಪಣ್ಣ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net