ಅಕ್ರಮ ಅಕ್ಕಿ ಸಾಗಿಸುತ್ತಿದ್ದ ವಾಹನ ವಶಕ್ಕೆ

16 bdm dali
ಬಾದಾಮಿ; ಅಕ್ರಮ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಮತ್ತು ದಾಳಿ ಮಾಡಿದ ಅಧಿಕಾರಿಗಳ ತಂಡ.
Published on

ಬಾದಾಮಿ: ತಾಲೂಕಿನ ಚೊಳಚಗುಡ್ಡ ಗ್ರಾಮದಲ್ಲಿ ಸರ್ಕಾರದ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಓರ್ವನನ್ನು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ಕಿ ಚೀಲ ತುಂಬಿದ್ದ ವಾಹನ ವಶಪಡಿಸಿಕೊಂಡಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಇಳಕಲ್ಲದ ಮಹಮ್ಮದ್‌ಸಲೀಂ ಮಹಮ್ಮದಸಾಬ ಜಮಾದಾರ ಆರೋಪಿ.

ಖಚಿತ ಮಾಹಿತಿ ಮೇರೆಗೆ ಗ್ರಾಮದ ಹನುಮಾನ ಗುಡಿ ಬಳಿ ಟಾಟಾ ಏಸ್ ವಾಹನದಲ್ಲಿ ಅಕ್ಕಿ ಮಾರುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದರು. 12 ಅಕ್ಕಿ ಚೀಲಗಳಲ್ಲಿನ ಒಟ್ಟು 360 ಕೆಜಿ ತೂಕದ 12240 ರೂ. ಮೌಲ್ಯದ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಆಹಾರ ಇಲಾಖೆ ನಿರೀಕ್ಷಕ ಮಂಜುನಾಥ ರೊಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳಾದ ಎ.ಎಸ್. ಕೊತ್ವಾಲ ಹಾಗೂ ಸಿಬ್ಬಂದಿ ದಾಳಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net