

ಬೆಂಗಳೂರು: ವಿಜಯನಗರ ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್ ನೇಮಕವಾಗಿದ್ದಾರೆ. ಶಶಿಕಲಾ ಜೊಲ್ಲೆ ಅವರನ್ನು ವಿಜಯನಗರದ ಉಸ್ತುವಾರಿಯಿಂದ ತೆಗೆದು ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ.
ಆನಂದ್ ಸಿಂಗ್ರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮತ್ತೆ ವಿಜಯನಗರ ಜಿಲ್ಲೆ ಉಸ್ತುವಾರಿಯನ್ನಾಗಿ ಅವರನ್ನ ನೇಮಕ ಮಾಡಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಈ ಹಿಂದೆ ಆನಂದ್ ಸಿಂಗ್ ಅಸಮಾಧಾನ ಹೊರಹಾಕಿದ್ದರು. ಇದೀಗ ತವರು ಜಿಲ್ಲೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.