ಡಿಸಿಎಂ ಲಕ್ಷ್ಮಣ ಸವದಿ ಅಣ್ಣನ ಮಗ ಕರೊನಾಗೆ ಬಲಿ

vinoda prappa savadi
Published on

ಚಿಕ್ಕೋಡಿ: ರಾಜ್ಯದಲ್ಲಿ ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಿದ್ದು, ಜನರ ಬದುಕು ಮೂರಾಬಟ್ಟೆಯಾಗಿದೆ. ದೇಶದಲ್ಲಿ ನಿತ್ಯ ಸಾವಿರಾರು ಮಂದಿ ಈ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಇದೀಗ ರಾಜ್ಯದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕುಟುಂಬಕ್ಕೂ ಕರೊನಾ ನೋವು ತಂದೊಡ್ಡಿದೆ.

ಡಿಸಿಎಂ ಲಕ್ಷ್ಮಣ ಸವದಿ ಅವರ ಅಣ್ಣನ ಮಗ ಕರೊನಾದಿಂದ ಮೃತಪಟ್ಟಿದ್ದಾರೆ. ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ‌ ಸವದಿ ಅವರ ಪುತ್ರ ವಿನೋದ ಪರಪ್ಪ ಸವದಿ(36) ಮೃತರು.

ಕಳೆದ ವಾರ ವಿನೋದ ಪರಪ್ಪ ಸವದಿ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಒಂದು ವಾರದಿಂದ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು(ಬುಧವಾರ) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net