ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿದ್ದ ಗೋದಾಮು ಸೀಜ್

kanchagaargalli
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ, ಮಾರಾಟ, ಸಂಗ್ರಹಣೆ ವಿರುದ್ಧ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಯಾಚರಣೆ ಮುಂದುವರಿಸಿದೆ. ಪಾಲಿಕೆಯ ವಲಯ ಕಚೇರಿ 11ರ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಕಂಚಗಾರಗಲ್ಲಿ ಕ್ರಾಸ್ ಪ್ರಥಮ ಶೆಟ್ಟಿ ಓಣಿಯಲ್ಲಿನ ನ್ಯೂ ವಿಶಾಲ ಎಂಟರಪ್ರೖೆಸಸ್​ಗೆ ಸೇರಿದ ಗೋದಾಮು ಸೀಜ್ ಮಾಡಿದ್ದಾರೆ.

ಈ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ 108.2 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಆರೋಗ್ಯ ನಿರೀಕ್ಷಕರಾದ ನೂರಂದಪ್ಪ ಭಜಂತ್ರಿ, ದೀಪಿಕಾ ಆರ್., ಮಂಜುನಾಥ ಹಾಗೂ ಪೌರ ಕಾರ್ವಿುಕರು ಇದ್ದರು.

ವಲಯ ಕಚೇರಿ 3 ಮತ್ತು 9ರ ವ್ಯಾಪ್ತಿಯ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ 22 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ಅಂಗಡಿಕಾರರಿಗೆ 7 ಸಾವಿರ ರೂ. ದಂಡ ವಿಧಿಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ಬಳಕೆ ಪುನರಾವರ್ತನೆಯಾದಲ್ಲಿ ಅಂಗಡಿಗಳ ಟ್ರೇಡ್ ಲೈಸನ್ಸ್ ರದ್ದು ಪಡಿಸಲು ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net