ಸಾತೊಡ್ಡಿ ಬರುವ ಪ್ರವಾಸಿಗರಿಗೆ ಎಚ್ಚರಿಕೆ

Sathoddi
Published on

ಯಲ್ಲಾಪುರ: ತಾಲೂಕಿನ ಸಾತೊಡ್ಡಿ ಸುತ್ತ ಮುತ್ತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸಾತೊಡ್ಡಿ ಜಲಪಾತ ತುಂಬಿ ಹರಿಯುತ್ತಿದೆ. ಜಲಪಾತ ನೋಡಲು ಬಂದ ಪ್ರವಾಸಿಗರು ಎಚ್ಚರಿಕೆ ವಹಿಸಬೇಕು ಎಂದು ಕುಂಬ್ರಾಳ ಕಂಚನಗದ್ದೆ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ನಾರಾಯಣ ಭಟ್ಟ ಕಂಚನಗದ್ದೆ ಪ್ರವಾಸಿಗರಲ್ಲಿ ವಿನಂತಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಲಪಾತದಲ್ಲಿ ನೀರು ರಭಸದಿಂದ ಹರಿಯುತ್ತಿದ್ದು, ಪ್ರವಾಸಿಗರು ನೀರಿಗಿಳಿಯುವ ಸಾಹಸ ಮಾಡಬಾರದು. ಜಲಪಾತಕ್ಕೆ ಹೋಗುವ ದಾರಿಯ ಪಕ್ಕದಲ್ಲಿರುವ ಗುಡ್ಡ ಕುಸಿಯುವ ಭೀತಿ ಇರುವ ಕಾರಣ ಪ್ರವಾಸಿಗರು ಎಚ್ಚರ ವಹಿಸುವುದು ಅಗತ್ಯ. ಜಲಪಾತ ವೀಕ್ಷಣೆಗೆ ಹೋದವರು, ಹೆಚ್ಚು ಸಮಯ ಅಲ್ಲಿ ಕಳೆಯದೆ, ನೋಡಿದ ತಕ್ಷಣ ವಾಪಸಾಗುವಂತೆ ಅವರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net