ಕೃಷಿ ಹೊಂಡದಲ್ಲಿ ಮುಳುಗಿ ಕಾಡುಕೋಣ ಸಾವು

6sor7
ಸೊರಬ ತಾಲೂಕು ಅಂದವಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಕಾಡುಕೋಣ.
Published on

ಸೊರಬ: ಕೃಷಿ ಹೊಂಡದಲ್ಲಿ ಮುಳುಗಿ ಕಾಡುಕೋಣ ಮೃತಪಟ್ಟ ಘಟನೆ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನಡೆದಿದೆ.

ಗುರುವಾರ ರಾತ್ರಿ ನೀರನ್ನು ಅರಸಿ ಬಂದಿದ್ದ ಕಾಡುಕೋಣ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು ಮೃತಪಟ್ಟಿದೆ. ಶುಕ್ರವಾರ ಬೆಳಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಯಂತ್ರದ ಮೂಲಕ ಕಾಡುಕೋಣದ ದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ, ಕಾಡಿನಲ್ಲಿ ಹೂತು ಹಾಕಿದ್ದಾರೆ.
ಡಿಎಫ್‌ಒ ಸಂತೋಷ್ ಕೆಂಚಪ್ಪ, ಎಸಿಎಫ್ ಶ್ರೀಧರ್, ವಲಯ ಅರಣ್ಯಾಧಿಕಾರಿ ಜಾವಿದ್ ಬಾಷಾ ಅಂಗಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net