ಸರ್ವರಿಗೂ ಸಮಬಾಳು ಸಂವಿಧಾನದ ಆಶಯ

25 mlv 1
Published on

ಮಳವಳ್ಳಿ: ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದಿಂದ ಇಡೀ ವಿಶ್ವ ಪರಮಾಣು ಭೀತಿ ಎದುರಿಸುತ್ತಿದೆ. ಆದರೆ, ಭಾರತದಲ್ಲಿ ಅಂತಹ ಆತಂಕ ಇಲ್ಲದಿರಲು ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಸಂವಿಧಾನ ಕಾರಣ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿಪ್ರಾಯಪಟ್ಟರು.


ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬುಧವಾರ ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ಮಣ್ಣು ನಮ್ಮ ದೇಶ’ ಅಮೃತ ಕಳಸ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೂರದೃಷ್ಟಿಯಿಂದ ಪ್ರಪಂಚದ ಎಲ್ಲ ಸಂವಿಧಾನಗಳನ್ನು ಅಧ್ಯಯನ ಮಾಡಿ ದೇಶದ ಸಂವಿಧಾನವನ್ನು ಸಿದ್ಧಪಡಿಸಿದ ಮಹಾನ್ ನಾಯಕ ಅಂಬೇಡ್ಕರ್ ಅವರನ್ನು ನಾವು ಸ್ಮರಿಸಬೇಕು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಏಕತೆಯನ್ನು ಅರಿತುಕೊಳ್ಳಲು ಸಂವಿಧಾನ ಅವಶ್ಯ. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವುದನ್ನು ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿದೆ ಎಂದರು.

ತಹಸೀಲ್ದಾರ್ ಲೋಕೇಶ್, ತಾಪಂ ಇಒ ಮಮತಾ, ಪುರಸಭೆ ಮುಖ್ಯಾಧಿಕಾರಿ ನಾಗರತ್ನಾ, ಸಿಡಿಪಿಒ ದೀಪಾ, ಶಾಂತಿ ಕಾಲೇಜು ಪಾಂಶುಪಾಲ ವೇದಮೂರ್ತಿ, ಅರುಣ್ ಕುಮಾರ್, ನಾಗರಾಜು, ಕೆಂಪರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net