ಅಪಘಾತದಲ್ಲಿ ಮಹಿಳೆ ಸಾವು

TKE acci
ಹಳಿಯೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿರುವುದು.
Published on

ತರೀಕೆರೆ: ಹಳಿಯೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಲಾರಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ತಮಿಳುನಾಡು ಮೂಲದ ಮಹಿಳೆ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಶರ್ಮಿಳಾ (48) ಮೃತ ದುರ್ದೈವಿ. ಷಣ್ಮುಗ (52), ಅಜಿತ್ (23), ಚಾಲಕ ತನಿಖಾಚಲಂ (35) ಗಾಯಗೊಂಡವರು.

ಶುಕ್ರವಾರ ಬೆಳಗ್ಗೆ ಶಿವಮೊಗ್ಗದಿಂದ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ಕಾರು ಮತ್ತು ಬೀರೂರಿನಿಂದ ತರೀಕೆರೆ ಕಡೆ ಹೊರಟಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net