ಅಪಘಾತದಲ್ಲಿ ಮಹಿಳೆ ಸಾವು

30Kush01
Published on

ಮಡಿಕೇರಿ: ಕುಶಾಲನಗರ ಸಮೀಪದ ಗುಡ್ಡೆಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಕೆಎಸ್‌ಆರ್‌ಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟು, ಮತ್ತೊಬ್ಬ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.


ಸಿದ್ದಾಪುರದ ನಿವಾಸಿ ಲಲಿತಾ (53) ಮೃತರು. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸಿಂಚನಾ ಗಾಯಗೊಂಡರು. ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಲಲಿತಾ ಕುಶಾಲನಗರದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಅವರ ಸಹೋದರಿ ಪುತ್ರಿ ಸಿಂಚನಾ ಲಲಿತಾ ಅವರನ್ನು ಕರೆದುಕೊಂಡು ಅತ್ತೂರಿನಿಂದ ಗುಡ್ಡೆಹೊಸೂರಿಗೆ ಬರುತ್ತಿದ್ದರು. ಈ ವೇಳೆ ಮಡಿಕೇರಿಯಿಂದ ಮೈಸೂರಿಗೆ ತರೆಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿ ಸವಾರರಾದ ಲಲಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಕುಶಾಲನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net