

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಾರಿಗೆ ಸಂಸ್ಥೆಯ ಬಸ್ ಹಾಗೂ ದ್ವಿಚಕ್ರ ವಾಹನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಗರದ ಸಾಧನಕೇರಿ ಬಳಿ ಶುಕ್ರವಾರ ಸಂಜೆ ನಡೆದಿದೆ. ಚಿತ್ರಲೇಖಾ ಜಿರಲಿ (45) ಮೃತ ಮಹಿಳೆ. ಮುಗದ ಗ್ರಾಮದಿಂದ ಮರಳುತ್ತಿದ್ದ ಬಸ್ ಮುಂದೆ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಗಾಯಗೊಂಡ ಚಿತ್ರಲೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.