ಅನೈತಿಕ ಸಂಬಂಧದ ಸಂಶಯ ಹಿನ್ನೆಲೆ ಮಹಿಳೆ ಕೊಲೆ, ಅಪರಾಧಿಗೆ ಜೀವಾವಧಿ ಶಿಕ್ಷೆ

court
Published on

ವಿಜಯಪುರ: ಅನೈತಿಕ ಸಂಬಂಧದ ಸಂಶಯ ಹಿನ್ನೆಲೆ ಮಹಿಳೆಯೋರ್ವಳನ್ನು ಕೊಲೆ ಮಾಡಿ ಆಕೆಯ ಮಗನ ಮೇಲೂ ಹಲ್ಲೆ ನಡೆಸಿದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಇಂಡಿಯ ಹುಸೇನಬಾಷ ಊರ್ಫ್ ಬಾಷಾ ದಾದಾಪೀರ ಶೇಖ ಶಿಕ್ಷೆಗೆ ಗುರಿಯಾದ ಅಪರಾಧಿ. ಈತ 2023 ಫೆ.21ರಂದು ಸಂಜೆ 5.30ಕ್ಕೆ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದ ಹತ್ತಿರದ ಅಂಜುಮನ್ ಶಾಲೆಯ ಬಳಿ ದಿಲ್‌ಶಾದ್‌ಬೇಗಂ ಆದಮಸಾಬ್ ಹವಾಲ್ದಾರ್ ಮೇಲೆ ತಲವಾರ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದನು. ಅಲ್ಲದೇ, ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ದಿಲ್‌ಶಾದ್‌ಬೇಗಂ ಪುತ್ರನ ಮೇಲೂ ಹಲ್ಲೆ ಮಾಡಿದ್ದನು.

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಭಾಷ ಸಂಕದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 86 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ವಿ.ಎಸ್. ಇಟಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net