

ಮೈಸೂರು: ಆತ್ಮವಿಶ್ವಾಸ ಆಭರಣವಾದಾಗ ಮಹಿಳೆ ಸರ್ವ ರೀತಿಯಿಂದಲೂ ಅಭಿವೃದ್ಧಿ ಕಾಣಲು ಸಾಧ್ಯ. ಆದ್ದರಿಂದ ಮಹಿಳೆಯರು ಆತ್ಮವಿಶ್ವಾಸವನ್ನು ಆಭರಣವನ್ನಾಗಿಸಿಕೊಳ್ಳಬೇಕು ಎಂದು ಮೈಸೂರು ವಿವಿ ಕುಲಸಚಿವೆ ವಿ.ಆರ್.ಶೈಲಜಾ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.
ನಗರದ ಎಂಎಂಕೆ ಮತ್ತು ಎಸ್‌ಡಿಎಂ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ 2023-24ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ನಿರಂತರ ಚಟುವಟಿಕೆಗಳು ವಿದ್ಯಾರ್ಥಿನಿಯರಿಗೆ ಪೂರಕವಾಗಿದ್ದು, ಇಲ್ಲಿ ಅಧ್ಯಯನ ಮಾಡುವುದರಿಂದ ಪದವಿಯ ಜೊತೆಗೆ ವ್ಯಕ್ತಿತ್ವ ವಿಕಸನವೂ ಆಗುತ್ತದೆ. ಡಾ.ವೀರೇಂದ್ರ ಹೆಗ್ಗಡೆ ಅವರ ಸಮರ್ಥ ಮಾರ್ಗದರ್ಶನ ಮತ್ತು ದೂರ ದೃಷ್ಟಿಯಿಂದ ಕಾಲೇಜಿನಲ್ಲಿ ಮಹತ್ತರವಾದ ಕಾರ್ಯಕ್ರಮಗಳನ್ನು ನಡೆಯುತ್ತಿವೆ ಎಂದರು.