ಶಕ್ತಿಯ ಪ್ರತಿರೂಪವಾಗಿರುವ ಸ್ತ್ರೀ

ಶಕ್ತಿಯ ಪ್ರತಿರೂಪವಾಗಿರುವ ಸ್ತ್ರೀ
Published on

ನಾಪೋಕ್ಲು: ತ್ಯಾಗಮೂರ್ತಿಯಾದ ಮಹಿಳೆ ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿಯ ಪ್ರತಿರೂಪವಾಗಿದ್ದಾಳೆ ಎಂದು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕಿ, ಲೇಖಕಿ ಡಾ.ಕಾವೇರಿ ಪ್ರಕಾಶ್ ಹೇಳಿದರು.

ಇಲ್ಲಿನ ಮಹಿಳಾ ಸಮಾಜದಲ್ಲಿ ಮಂಗಳವಾರ ಮಹಿಳಾ ಸಮಾಜ ಮತ್ತು ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಹಿಳೆ ವ್ಯವಸ್ಥಿತ ಬದುಕನ್ನು ಕಟ್ಟಿಕೊಳ್ಳುವ ಮೂಲಕ ಇತರರಿಗೆ ಮಾರ್ಗದರ್ಶಕರಾಗಬೇಕೆಂದರು. ಮಹಿಳೆ ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ಪುರುಷ ಪ್ರಧಾನ ಸಮಾಜದಲ್ಲಿ ತನ್ನ ಅಸ್ಮಿತೆ ಉಳಿಸಿಕೊಳ್ಳಲು ಶ್ರಮಿಸಬೇಕು, ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಉನ್ನತಿ ಸಾಧಿಸಲು ಗಮನಹರಿಸಬೇಕೆಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ.ಮಾದಂಡ ಪ್ರಿಯದರ್ಶಿನಿ ಮಾತನಾಡಿ, ಕುಟುಂಬದ ಆಧಾರ ಸ್ಥಂಭವಾಗಿರುವ ಮಹಿಳೆಯನ್ನು ಪ್ರತಿಯೊಬ್ಬರು ಗೌರವಿಸಬೇಕು. ಆರೋಗ್ಯದ ದೃಷ್ಟಿಯಿಂದ ಮಹಿಳೆಯರು ಜಾಗೃತರಾಗಿರಬೇಕು. ಮಾರಕ ಕ್ಯಾನ್ಸರ್ ನಂತಹ ರೋಗಗಳು ಬಾಧಿಸುವ ಮೊದಲೇ ಮುನ್ನಚ್ಚರಿಕೆ ವಹಿಸಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಚೆಟ್ಟಿರ ರೇಷ್ಮಾ ಉತ್ತಪ್ಪ ವಹಿಸಿದ್ದರು. ಮಹಿಳಾ ಸಮಾಜದ ಉಪಾಧ್ಯಕ್ಷೆ ಬೊಪ್ಪಂಡ ಶೈಲಾ ಬೋಪಯ್ಯ, ಲಯನ್ಸ್ ಕ್ಲಬ್ ಅಧ್ಯಕ್ಷೆ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಲಯನ್ ಕಾರ್ಯದರ್ಶಿ ಕಾಂಡಂಡ ರೇಖಾ ಪೊನ್ನಣ್ಣ,

ಮಹಿಳಾ ಸಮಾಜದ ನಿರ್ದೇಶಕಿ ಕೆಟೋಳಿರ ಶಾರದಾ ಪಳಂಗಪ್ಪ, ಬಿದ್ದಾಟಂಡ ಗಿರಿಜಾ ಬೋಪಣ್ಣ, ಅಪ್ಪಾರಂದ ಡೇಜಿ ತಿಮ್ಮಯ್ಯ, ಕುಂಡ್ಯೋಳಂಡ ಕವಿತಾ ಮುತ್ತಣ್ಣ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಕಾರ್ಯದರ್ಶಿ ರಾಜೇಶ್ವರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net