ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸಾವು

crime
Published on

ಹುಬ್ಬಳ್ಳಿ: ಇಲ್ಲಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಗಾಯಗೊಂಡಿದ್ದ ನಾಲ್ವರಲ್ಲಿ ಮಹಿಳೆಯೊಬ್ಬರು ಇಲ್ಲಿಯ ಕೆಎಂಸಿ ಆರ್‌ಐನಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಕ್ರೀಡಾ ತರಬೇತುದಾರ ಮಹಾಂತೇಶ ಬಳ್ಳಾರಿ ಪತ್ನಿ ದೈಹಿಕ ಶಿಕ್ಷಣ ಶಿಕ್ಷಕಿ ಗಂಗಮ್ಮ ಬಳ್ಳಾರಿ ಮೃತರು. ಇತ್ತೀಚೆಗೆ ಅಡುಗೆ ಅನಿಲ ಸೋರಿಕೆಯಾಗಿ ಗಂಗಮ್ಮ ತೀವ್ರವಾಗಿ ಗಾಯಗೊಂಡಿದ್ದರು. ಶೇ. 60ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿದ್ದವು. ಪತಿ ಮಹಾಂತೇಶ, ಪುತ್ರಿ ಕಾರುಣ್ಯ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪುತ್ರ ಮನೋರಂಜನ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇವತ್ತು ಇಲ್ಲವೇ ನಾಳೆ ಉಳಿದವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net