ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

Crime Logo
Published on

ಮೈಸೂರು: ನಗರದ ಗ್ರಾಮಾಂತರ ಬಸ್ ನಿಲ್ದಾಣದಿಂದ ಬಸ್‌ನಲ್ಲಿ ಮದ್ದೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನದ ಸರ ಕಳವಾಗಿದೆ.

ಎಚ್.ಡಿ.ಕೋಟೆಯ ಟೈಗರ್ ಬ್ಲಾಕಿನ ನಿವಾಸಿ ನೀಲಂ 2.5 ಲಕ್ಷ ರೂ. ವೌಲ್ಯದ 40 ಗ್ರಾಂ ಚಿನ್ನದ ಸರ ಕಳೆದುಕೊಂಡಿದ್ದು, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏಪ್ರಿಲ್ 12 ರಂದು ನೀಲಂ ಎಚ್.ಡಿ.ಕೋಟೆಯಿಂದ ಮೈಸೂರಿಗೆ ಬಂದಿದ್ದು, ಗ್ರಾಮಾಂತರ ಬಸ್ ನಿಲ್ದಾಣದಿಂದ ಮದ್ದೂರಿಗೆ ತೆರಳುವಾಗ ಕತ್ತಿನಲ್ಲಿದ್ದ ಚಿನ್ನದ ಸರ ಕಳವಾಗಿದೆ ಎಂದು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net