ಮೆಟ್ರೋ ಎರಡನೇ ಹಂತದ ಕಾಮಗಾರಿ ವೇಳೆ ಕಾರ್ವಿುಕ ಸಾವು

Man Death 29 Feb 20
Published on

ಬೆಂಗಳೂರು: ನಮ್ಮ ಮೆಟ್ರೋ 2ನೇ ಹಂತದ ನಿರ್ಮಾಣ ಹಂತದಲ್ಲಿನ ನಿಲ್ದಾಣದಲ್ಲಿ ಎಸ್ಕಲೇಟರ್ ಅಳವಡಿಕೆ ವೇಳೆ ಕಾನ್​ಕೋರ್ಸ್ ಮಟ್ಟದಿಂದ ನೆಲಮಹಡಿಗೆ ಬಿದ್ದು ಕಾರ್ವಿುಕ ಮೃತಪಟ್ಟಿದ್ದಾನೆ.

ಆಂಧ್ರಪ್ರದೇಶ ಮೂಲದ ಶ್ರೀಕಾಕುಲಂ (56) ಮೃತ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಪಟ್ಟಣಗೆರೆ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್ ಅಳವಡಿಕೆಗೆ ಅಗತ್ಯವಿರುವ ಕೆಲಸದಲ್ಲಿ ತೊಡಗಿದ್ದಾಗ ಆಯತಪ್ಪಿ ನೆಲಮಹಡಿಗೆ ಬಿದ್ದಿದ್ದಾರೆ.

ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net