ಶನಿವಾರಸಂತೆ: ಸೋಮವಾರಪೇಟೆ ಸಾಂಬಾರ ಮಂಡಳಿಯ ಕ್ಷೇತ್ರಾಧಿಕಾರಿಗಳ ಕಚೇರಿ ಹಾಗೂ ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಸೆ.25 ಇಂದು ಬೆಳಗ್ಗೆ 10 ಗಂಟೆಗೆ ಸಮೀಪದ ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಏಲಕ್ಕಿ ಮತ್ತು ಕಾಳುಮೆಣಸು ಬೆಳೆಯ ಗುಣಮಟ್ಟ ಸುಧಾರಣೆಯ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರವನ್ನು ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಪಿ.ಶೇಷಾದ್ರಿ ಉದ್ಘಾಟಿಸಲಿದ್ದು, ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ವಿ.ಎಲ್.ವರ್ಷಿತ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಕಲೇಶಪುರ ಸಾಂಬಾರ ಮಂಡಳಿಯ ಉಪ ನಿರ್ದೇಶಕ ಎಂ.ವೈ.ಹೊನ್ನೂರು, ಮಡಿಕೇರಿ ಸಾಂಬಾರ ಮಂಡಳಿಯ ಸಹಾಯಕ ನಿರ್ದೇಶಕಿ ಆರ್.ರಶ್ಮಿ, ಸೋಮವಾರಪೇಟೆ ಸಾಂಬಾರ ಮಂಡಳಿಯ ಕ್ಷೇತ್ರಾಧಿಕಾರಿ ಎನ್.ಬಿ.ಲೋಕೇಶ್, ಪ್ರಗತಿಪರ ಕಾಳುಮೆಣಸು ಬೆಳೆಗಾರ ಕಾಂತರಾಜು, ಶನಿವಾರಸಂತೆ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಆರ್.ಪಿ.ಲಕ್ಷ್ಮಣ್, ಕಾಳುಮೆಣಸು ಬೆಳೆಗಾರ ಎಚ್.ವಿ.ದಿವಾಕರ್, ಶನಿವಾರಸಂತೆ ರೋಟರಿ ಕ್ಲಬ್ ಕಾರ್ಯದರ್ಶಿ ಶ್ವೇತಾ ವಸಂತ್ ಮುಂತಾದವರು ಭಾಗವಹಿಸಲಿರುವ ಕಾರ್ಯಾಗಾರದಲ್ಲಿ ದೋಣಿಗಲ್ ಭಾರತೀಯ ಏಲಕ್ಕಿ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಮತ್ತು ವಿಜ್ಞಾನಿ ಡಾ.ಕೆ.ಎನ್.ಹರ್ಷ ಬೆಳೆಗಾರರಿಗೆ ಮಾಹಿತಿ ನೀಡುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.