ನಿಮ್ಮ ಕಾಲಿಗೆ ಬೀಳ್ತೀನಿ, ಪ್ಲೀಸ್​ ಬಿಟ್ಬಿಡಿ ಎಂದು ಅಂಗಲಾಚಿದ್ರೂ ನಗ್ನಗೊಳಿಸಿ ಅಂಗಾಂಗ ಮುಟ್ಟಿ ಮನಬಂದಂತೆ ಥಳಿಸಿದ್ರು...

Harassment sex
Published on

ಯಾದಗಿರಿ: ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬಯಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನ ಬೆತ್ತಲೆ ಮಾಡಿದ ಕಾಮುಕರು, ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಕಬ್ಬಿನ ಜಲ್ಲೆಯಲ್ಲಿ ಮನಬಂದಂತೆ ಥಳಿಸಿದ್ದಾರೆ. ಅಷ್ಟೇ ಅಲ್ಲ ಕೃತ್ಯವನ್ನ ಮೊಬೈಲ್​ನಲ್ಲಿ ವಿಡಿಯೋ ಕೂಡ ಮಾಡಿಕೊಂಡಿದ್ದಾರೆ...

ಕೆಲ ತಿಂಗಳ ಹಿಂದೆಯೇ ಈ ಘಟನೆ ನಡೆದಿದ್ದು, ಕಾಮುಕರ ಪೈಶಾಚಿಕ ಕೃತ್ಯದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. 'ನಿಮ್ಮ ಕಾಲಿಗೆ ಬೀಳ್ತೀನಿ, ಪ್ಲೀಸ್​ ನನ್ನನ್ನು ಬಿಟ್​ ಬಿಡಿ' ಎಂದು ಮಹಿಳೆ ಕಣ್ಣೀರಿಟ್ಟು ಬೇಡಿಕೊಂಡರೂ ಬಿಡದ ನಾಲ್ವರು ಆಕೆಯ ಅಂಗಾಂಗಳನ್ನು ಮುಟ್ಟಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಯಾದಗಿರಿಯ ಚಟ್ನಳ್ಳಿ ಹಾಗೂ ಹಳಿಸಗರ ಗ್ರಾಮದ ನಡುವಿನ ಸುತ್ತಾಮುತ್ತ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ಮೇಲೆ ಪೈಶಾಚಿಕ ಕೃತ್ಯವೆಸಗಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಒಂದೂವರೆ ವರ್ಷದ ಹಿಂದೆ ನಡೆದದ್ದು ಎಂದು ಆರೋಪಿಗಳು ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾರೆ ಎಂದು ಯಾದಗಿರಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವೇದಮೂರ್ತಿ ತಿಳಿಸಿದ್ದಾರೆ. ಆದರೆ ಮಹಿಳೆ ಯಾರೆಂಬುದು ಗೊತ್ತಾಗಿಲ್ಲ. ನಮ್ಮ ಸಂಪರ್ಕಕ್ಕೂ ಅವರು ಬಂದಿಲ್ಲ. ಈ ಘಟನೆ ಬಗ್ಗೆ ಶಹಾಪುರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್​ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net