

ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಮೊದಲ ತಂಡದಲ್ಲಿ ಸಾಂಸ್ಕೃತಿಕ ನಗರಿ ಮೈಸೂಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಬುಧವಾರ ಮಧ್ಯಾಹ್ನ ಮೈಸೂರಿನತ್ತ ಪಯಣ ಬೆಳೆಸಿ ಸಂಜೆ ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಆಗಮಿಸಿ ವಾಸ್ತವ್ಯ ಹೂಡಿದವು.
ಇನ್ನೂ ಎರಡು ದಿನಗಳ ಕಾಲ ಗಜಪಡೆ ಅರಣ್ಯ ಭವನದ ಆವರಣದಲ್ಲಿಯೇ ಉಳಿಯಲಿದ್ದು, ಆ. 23 ರಂದು ಗಜಪಡೆ ಅರಮನೆ ಆವರಣ ಪ್ರವೇಶಿಸಲಿವೆ.