ಕೆರೆಗೆ ಬಿದ್ದು ಯುವ ಉದ್ಯಮಿ ಸಾವು

Ull_Sudhakar
Published on

ಉಳ್ಳಾಲ: ಮನೆಯ ಸನಿಹದಲ್ಲಿರುವ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿಬಿದ್ದು ಉದ್ಯಮಿ, ಮೋರ್ಲ ಕಂಬಳ ಕೋಣದ ಯಜವಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ(45) ಮತಪಟ್ಟಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಬೇಕರಿ ತಿಂಡಿ ತಿನಿಸುಗಳ ತಯಾರಕ, ಕೃಷಿಕರಾಗಿ ಜನಾನುರಾಗಿಯಾಗಿದ್ದ ಇವರು, ಮಂಗಳವಾರ ಬೆಳಗ್ಗೆ 11 ಗಂಟೆಯ ಬಳಿಕ ಮನೆಯಿಂದ ನಾಪತ್ತೆಯಾಗಿದ್ದರು. ಮನೆ ಮಂದಿ ಹಾಗೂ ಸ್ಥಳೀಯರು ಸುತ್ತಮುತ್ತಲು ಹುಡುಕಾಟ ನಡೆಸಿದ್ದು, ಈ ಸಂದರ್ಭ ಮನೆಯ ಪಕ್ಕದ ಕೆರೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೃಷಿ ಪರಿಕರಗಳು ಜತೆಗಿದ್ದು, ಬಿದ್ದ ರಭಸಕ್ಕೆ ಮುಖದ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net