ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

Srinivas
ಟಿ. ಶ್ರೀನಿವಾಸ್
Published on

ಕೆ.ಎಂ.ದೊಡ್ಡಿ: ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಯುವ ರೈತ ಸಾಲಬಾಧೆ ತಾಳಲಾರದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಟಿ. ಶ್ರೀನಿವಾಸ್(31) ಆತ್ಮಹತ್ಯೆ ಮಾಡಿಕೊಂಡವರು. ಕೃಷಿ ಜತೆಗೆ ಹೈನುಗಾರಿಕೆ, ಕುರಿ ಸಾಕಣೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಕೃಷಿಯಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡರು ಎನ್ನಲಾಗಿದೆ.

ಈ ಸಂಬಂಧ ಮೃತರ ತಾಯಿ ಸುನಂದಮ್ಮ ನೀಡಿದ ದೂರಿನ ಮೇರೆಗೆ ಭಾರತೀನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net