ನೇಣು ಬಿಗಿದು ಯುವಕ ಆತ್ಮಹತ್ಯೆ

Paresh
Published on

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಮರಿಯಾಡಿಯಲ್ಲಿ ದಿ.ಮುನ್ನಾ ಎಂಬುವರ ಪುತ್ರ ಪಾರಿಶ್(18) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಟಿಪ್ಪರ್, ಟೆಂಪೋಗೆ ಬದಲಿ ಚಾಲಕನಾಗಿ ದುಡಿಯುತ್ತಿದ್ದನು. ಮಂಗಳವಾರ ಮಧ್ಯಾಹ್ನ ಕೆಲಸ ಮುಗಿಸಿ ಮನೆಗೆ ಬಂದವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಪಾರಿಶ್ ತಂದೆ ಮುನ್ನಾ ಎಂಬುವರು ಕೆಲವರ್ಷದ ಹಿಂದೆ ಮೂಡುಬಿದಿರೆಯಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net