

ಪಾಂಡವಪುರ: ತಾಲೂಕಿನ ದೊಡ್ಡಬ್ಯಾಡರಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದ ವೀರೇಂದ್ರ ಅವರ ಪುತ್ರ ಕಿಶೋರ್‌ಕುಮಾರ್(21) ಮೃತ ಯುವಕ. ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ತಿರುಪತಿ ಎಕ್ಸ್‌ಪ್ರೆಸ್ ರೈಲಿನ ಗಾಲಿಗೆ ಅಡ್ಡಲಾಗಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ ಎಂದು ರೈಲ್ವೆ ಪೊಲೀಸರರು ತಿಳಿಸಿದ್ದಾರೆ. ಪಾಂಡವಪುರ ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.