ಮ.ಬೆಟ್ಟದಲ್ಲಿ ಪ್ರಜ್ಞೆತಪ್ಪಿ ಬಿದ್ದು ಯುವಕ ಸಾವು

Crime Logo
Published on

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಯುವಕ ಗುರುವಾರ ಪ್ರಜ್ಞೆತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ ರಾಕೇಶ್(31) ಮೃತಪಟ್ಟವರು. ಈತ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದು, ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಗುರುವಾರ ಸ್ನೇಹಿತರ ಜತೆ ಮ.ಬೆಟ್ಟಕ್ಕೆ ಆಗಮಿಸಿದ್ದಾಗ ಅಸ್ವಸ್ಥಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಈ ಬಗ್ಗೆ ಸ್ನೇಹಿತರು ಮಾಹಿತಿ ನೀಡಿದ್ದರಿಂದ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತುರ್ತುವಾಹನ ಮೂಲಕ ಕೊಳ್ಳೇಗಾಲ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಗೆ ಕಳುಹಿಸಿದರು. ಆದರೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮೃತದೇಹವನ್ನು ಕೊಳ್ಳೇಗಾಲ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಮ.ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net