ವಾಹನ ಉರುಳಿ ಬಿದ್ದು ಯುವಕ ಸಾವು

Accident
Published on

ರಾಯಚೂರು: ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಬೊಲೆರೋ ಸರಕು ಸಾಗಣೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಯಾಪಲದಿನ್ನಿ ಗ್ರಾಮದ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಜರುಗಿದೆ.
ಮೃತನನ್ನು ಚಂದ್ರಬಂಡಾ ಗ್ರಾಮದ ಆಂಜಿನೇಯ (23) ಎಂದು ಗುರುತಿಸಲಾಗಿದ್ದು, ಚಾಲಕ ವೀರೇಶ ಹಾಗೂ ಆಂಜಿನೇಯ ತೀವ್ರವಾಗಿ ಗಾಯಗೊಂಡಿದ್ದಾರೆ. ಕಬ್ಬಿಣದ ಸರಳುಗಳನ್ನು ತುಂಬಿಕೊಂಡು ಹೋಗುತ್ತಿದ್ದಾಗ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ಆಂಜಿನೇಯ ವಾಹನದ ಕೆಳಗೆ ಸಿಕ್ಕುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಎಸ್ಪಿ ಬಿ.ನಿಖಿಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net