ರಸ್ತೆ ಅಪಘಾತದಲ್ಲಿ ಯುವಕ ಸಾವು

bike accident 1
Published on

ಹುಬ್ಬಳ್ಳಿ: ಇಲ್ಲಿನ ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಹೆಬಸೂರು ಗ್ರಾಮದಲ್ಲಿ ಲಾರಿ ಮತ್ತು ಬೈಕ್ ಅಪಘಾತದಲ್ಲಿ ಇತ್ತೀಚೆಗೆ ಯುವಕನೊಬ್ಬ ಮೃತಪಟ್ಟಿದ್ದಾನೆ.
ಹಳೇಹುಬ್ಬಳ್ಳಿ ಈಶ್ವರ ನಗರದ ನಿವಾಸಿ ಚನ್ನಪ್ಪ ವಿಜಾಪುರ(28) ಮೃತ ಯುವಕ. ಗ್ರಾಮದ ಹತ್ತಿರ ಹುಬ್ಬಳ್ಳಿ ಕಡೆಯಿಂದ ನವಲಗುಂದ
ಕಡೆಗೆ ಹೊರಟ ಲಾರಿ ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಬೈಕ್ ನಡೆಸುತ್ತಿದ್ದ ಚನ್ನಪ್ಪ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net