

ಕಡಬ: ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಟನೆ ಮಂಗಳೂರಿನಲ್ಲಿ ಶನಿವಾರ ನಡೆದಿದೆ.
ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬುವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅವರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.