ಚಿಕ್ಕಮಗಳೂರಿನಲ್ಲಿ ಅಪಘಾತಕ್ಕೆ ಅರಸಿನಮಕ್ಕಿಯ ಯುವಕ ಬಲಿ

channakeshava
Published on

ಬೆಳ್ತಂಗಡಿ: ಚಿಕ್ಕಮಗಳೂರಿನಲ್ಲಿ ಸರ್ಕಾರಿ ಬಸ್ ಮತ್ತು ದ್ವಿಚಕ್ರ ವಾಹನ ಮಧ್ಯೆ ನಡೆದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ತುಂಬೆತಡ್ಕ ನಿವಾಸಿ ಚೆನ್ನಕೇಶವ(28) ಎಂಬುವರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಕ್ಸ್‌ರೇ ಟೆಕ್ನಿಷಿಯನ್ ಆಗಿದ್ದ ಚೆನ್ನಕೇಶವ ಅವರು ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದು, ಅಜ್ಜಿ ಮನೆಯಾದ ಚಿಕ್ಕಮಗಳೂರಿಗೆ ಹೋಗಿದ್ದರು. ಅಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಒಂದಕ್ಕೆ ಹೋಗುತ್ತಿದ್ದಾಗ ಇವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂದೆ, ತಾಯಿ, ತಂಗಿಯನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net