ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ

CRIME LOGO
Published on

ಮೂಡಲಗಿ: ಕ್ಷುಲ್ಲಕ ಕಾರಣಕ್ಕೆ ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಗ್ರಾಪಂ ಉಪಾಧ್ಯ ಹಾಗೂ ಆತನ ಸಹಚರರು ಸೇರಿ ಹಲ್ಲೆ ಮಾಡಿರುವ ಟನೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಮುಧೋಳ ತಾಲೂಕಿನ ಮಿರ್ಜಿ ಗ್ರಾಮದ ಯುವಕ ಪ್ರಜ್ವಲ ಎಂಬಾತ ಯಾದವಾಡ ಗ್ರಾಮದಲ್ಲಿ ಚಹಾ ಅಂಗಡಿಯೊಂದರಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಯಾದವಾಡದ ಗ್ರಾಪಂ ಉಪಾಧ್ಯ ಕಲ್ಲಪ್ಪ ಗಾಣಿಗ ಹಾಗೂ ಆತನ ಸಹಚರ ಸೇರಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ. ಈ ದಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಲ್ಲೆಗೊಳಗಾದ ಯುವಕ ಮೂಡಲಗಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net