ಬೆಂಗಳೂರಲ್ಲಿ ಹಾಡಹಗಲೇ ಯುವಕನ ಅಸಭ್ಯ ವರ್ತನೆ: ಕಿರುಕುಳಕ್ಕೆ ಬೆಚ್ಚಿ ಚೀರಾಡಿದ ಬಾಲಕಿ...

harasment
Published on

ಬೆಂಗಳೂರು: ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದ್ದು, ಕಳೆದ ಒಂದು ವಾರದಿಂದ ಮೈಸೂರು, ತುಮಕೂರು, ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಹಾಡಹಗಲೇ ಯುವಕನೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಅಪರಿಚಿತ ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿದ್ದು, ವಿಡಿಯೋ ವೈರಲ್​ ಆಗಿದೆ.

ಪೀಣ್ಯದಲ್ಲಿ 16 ವರ್ಷದ ಬಾಲಕಿಗೆ ಯುವಕನೋರ್ವ ಹಾಡಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ. ಶನಿವಾರ ಸಂಜೆ ನಾಲ್ವರು ಯುವಕರ ಜತೆ ಗುಂಪು ಕಟ್ಟಿಕೊಂಡು ಬಂದ ಯುವಕ ಅದೇ ದಾರಿಯಲ್ಲಿ ಹೋಗುತ್ತಿದ್ದ ಬಾಲಕಿಯನ್ನು ಗಮನಿಸಿದ್ದ. ಬಾಲಕಿಯ ಹಿಂದೆ ಓಡಿ ಹೋಗಿ ಬಲವಂತವಾಗಿ ಆಕೆಯನ್ನು ತಬ್ಬಿಕೊಂಡು ಮುತ್ತು ಕೊಟ್ಟಿದ್ದಾನೆ.

ಆತಂಕಗೊಂಡ ಬಾಲಕಿ ಜೋರಾಗಿ ಕೂಗಿಕೊಂಡಾಗ ಆರೋಪಿ ಆಕೆಯನ್ನು ಬೆದರಿಸಿ ಪರಾರಿಯಾಗಿದ್ದಾನೆ. ಬಾಲಕಿ ಜತೆ ಯುವಕ ಅಸಭ್ಯವಾಗಿ ವರ್ತಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ. ಪ್ರಕರಣ ಸಂಬಂಧ ಎಫ್​ಐಆರ್ ದಾಖಲಿಸಿಕೊಂಡು ಕೂಡಲೇ ಆರೋಪಿಯನ್ನು ಬಂಧಿಸುವಂತೆ ಉತ್ತರ ವಿಭಾಗದ ಡಿಸಿಪಿ ಧಮೇಂದ್ರ ಕುಮಾರ್ ಮೀನಾ ಪೀಣ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net