ಶಶಿಕಲಾ ಜೊಲ್ಲೆಗೆ ಜೀರೋ ಟ್ರಾಫಿಕ್​ ವ್ಯವಸ್ಥೆ: ಪ್ರಕರಣದ ಮರುವಿಚಾರಣೆಗೆ ಹೈಕೋರ್ಟ್​ ನಕಾರ

shashikala jolle-1577177241
Published on

ಬೆಂಗಳೂರು: ಸಚಿವರ ಪ್ರಮಾಣ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಶಿಕಲಾ ಜೊಲ್ಲೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ 'ಜೀರೋ ಟ್ರಾಫಿಕ್​' ವ್ಯವಸ್ಥೆ ಕಲ್ಪಿಸಿದ ಪ್ರಕರಣವನ್ನು ಮರುವಿಚಾರಣೆ ನಡೆಸಲು ಹೈಕೋರ್ಟ್​ ನಿರಾಕರಿಸಿದೆ.

ಜೀರೋ ಟ್ರಾಫಿಕ್​ ವ್ಯವಸ್ಥೆ ನೀಡಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿಯನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಪ್ರಕರಣ ಸಂಬಂಧ ನೀಡಿದ್ದ ದೂರಿನ ಮೇರೆಗೆ ಸರ್ಕಾರ ಕೈಗೊಂಡಿರುವ ಕ್ರಮದ ವರದಿಯನ್ನು ನಿಮಗೆ ಒದಗಿಸಲಾಗುವುದು, ಸರ್ಕಾರದ ಆದೇಶದ ಬಗ್ಗೆ ಆಕ್ಷೇಪವಿದ್ದಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಅರ್ಜಿದಾರರಿಗೆ ತಿಳಿಸಿದ ಪೀಠ, ಪ್ರಕರಣವನ್ನು ಮರುಪರಿಗಣಿಸಲು ನಿರಾಕರಿಸಿ ಅರ್ಜಿ ಇತ್ಯರ್ಥಪಡಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net