

ಉಪ್ಪಳ: ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಅದಾಲತ್‌ನಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಸಚಿವ ವಿ.ಅಬ್ದು ರಹಿಮಾನ್ ಹೇಳಿದರು.
ಉಪ್ಪಳ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಶನಿವಾರ ನಡೆದ ಮಂಜೇಶ್ವರ ತಾಲೂಕು ಮಟ್ಟದ ಕುಂದುಕೊರತೆ ಹಾಗೂ ಬೆಂಬಲ ಅದಾಲತ್‌ನ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್, ಜಿಲ್ಲಾ ಪಂಚಾಯಿತಿ ಸದಸ್ಯೆ ಜಮೀಲಾ ಸಿದ್ದಿಕ್ ದಂಡೆಗೋಳಿ, ಮಂಜೇಶ್ವರ ಬ್ಲಾಕ್ ಪಂಚಾಯಿತಿ ಅಧ್ಯಕ್ಷೆ ಶಮೀನಾ ಟೀಚರ್, ಗ್ರಾಪಂ ಅಧ್ಯಕ್ಷೆ ಖದೀಜತ್ ರಿಸಾನ, ಮಂಜೇಶ್ವರ ಗ್ರಾ.ಪಂ.ಅಧ್ಯಕ್ಷೆ ಜೀನ್ ಲವಿನೊ ಮೊಂತೇರೊ. ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಸುಬ್ಬಣ್ಣ ಆಳ್ವ, ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ ಜೆ.ಎಸ್., ವರ್ಕಾಡಿ ಗ್ರಾ.ಪಂ.ಅಧ್ಯಕ್ಷೆ ಎಸ್. ಭಾರತಿ, ತುಳು ಅಕಾಡೆಮಿ ಅಧ್ಯಕ್ಷ ಕೆ.ಆರ್.ಜಯಾನಂದ, ಎಡಿಎಂ ಪಿ.ಅಖಿಲ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಸ್ವಾಗತಿಸಿ, ಕಾಸರಗೋಡು ಆರ್‌ಡಿಒ ಪಿ.ಬಿನುಮೋನ್ ವಂದಿಸಿದರು.