

ವಿಜಯಪುರ: ಸರ್ಕಾರಿ ಸೌಲಭ್ಯಗಳು, ಬ್ಯಾಂಕ್ ಸೌಲಭ್ಯಗಳು, ಕೃಷಿ ಇಲಾಖೆ ಸೌಲಭ್ಯಗಳು ಮತ್ತು ಬೆಳೆ ಪರಿಹಾರಗಳನ್ನು ಪಡೆಯಲು ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.
ಪಹಣಿ ಪತ್ರಕ್ಕೆ ಆಧಾರ್ ಜೋಡಣೆ ಮಾಡಲು ಅನುಕೂಲವಾಗುವಂತೆ ಹೊಸದಾದ ತಂತ್ರಾಂಶವನ್ನು ಸಿದ್ಧಗೊಳಿಸಿದ್ದು, ಈ ಕಾರ್ಯವನ್ನು ಮಾಡಲು ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿರುತ್ತದೆ.
ಸರ್ಕಾರದ ವಿವಿಧ ಪ್ರಯೋಜನಗಳನ್ನು ಪಡೆಯಲು ಶಾಶ್ವತ ಪರಿಹಾರದ ಅಂಗವಾಗಿ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಲು ಗ್ರಾಮ್ ಒನ್ ಕೇಂದ್ರ, ಗ್ರಾಮ ಆಡಳಿತ ಕಚೇರಿ ಅಥವಾ ಆಧಾರ್ ಕಾರ್ಡ್ ಲಿಂಕ್ ಮಾಡಲು ಆಡಳಿತ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದಾಗ ಅವರಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.