

ಮಡಿಕೇರಿ:
ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಗೆಂದು ಅಧಿಕಾರಿಗಳು ಮನೆ ಮನೆಗೆ ಬರುವ ಸಂದರ್ಭ ಆದಿ ದ್ರಾವಿಡ ಜನಾಂಗದವರು ಪರಿಶಿಷ್ಟ ಜಾತಿ ``ಆದಿ ದ್ರಾವಿಡ'' ಎಂದು ನಮೂದಿಸಬೇಕು. ಅಧಿಕಾರಿಗಳು ಕೂಡ ಇದನ್ನು ಅನುಮೋದಿಸಿ ಪರಿಶಿಷ್ಟ ಜಾತಿ ``ಆದಿ ದ್ರಾವಿಡ'' ಎಂದು ದಾಖಲಿಸಬೇಕು ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಮನವಿ ಮಾಡಿದ್ದಾರೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಜಾತಿ ಬಾಂಧವರಿಗೆ 8 ವಿವಿಧ ರೀತಿಯ `ಪರಿಶಿಷ್ಟ ಜಾತಿ' ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಇದರಿಂದ ತೊಂದರೆ ಎದುರಾಗಿದೆ. ಆದ್ದರಿಂದ ಪರಿಶಿಷ್ಟ ಜಾತಿ ``ಆದಿ ದ್ರಾವಿಡ'' ಎಂದು ಜಾತಿ ಪ್ರಮಾಣಪತ್ರ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ನ್ಯಾಯಮೂರ್ತಿ ಡಾ. ಹೆಚ್.ಎನ್. ನಾಗಮೋಹನ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬAಧಪಟ್ಟAತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ನಡೆಯಲಿದ್ದು, ಗಣತಿದಾರರು ಮನೆ-ಮನೆ ಸಮೀಕ್ಷೆಗೆ ಬರುವ ಸಂದರ್ಭ ಪರಿಶಿಷ್ಟ ಜಾತಿ ಸಮುದಾಯದವರು ಮಾಹಿತಿಯನ್ನು ನೀಡಬೇಕು.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಜಾತಿಯವರು ಪರಿಶಿಷ್ಟ ಜಾತಿ ``ಆದಿ ದ್ರಾವಿಡ'' ಎಂದು ಜಾತಿ ಪ್ರಮಾಣಪತ್ರ ನೀಡಲು ಸÀರ್ಕಾರÀ ಕ್ರಮ ಕೈಗೊಳ್ಳಬೇಕೆಂದು ಕಳೆದ ಅನೇಕ ವರ್ಷಗಳಿಂದ ಸಂಘಟನೆ ಮೂಲಕ ಒತ್ತಾಯಿಸುತ್ತಾ ಬರಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸÀರ್ಕಾರ ನಿರ್ದೇಶನ ನೀಡಿದೆ. ಜಿಲ್ಲಾಡಳಿತ ತಾಲೂಕು ಕಚೇರಿಗಳಿಗೆ ಆದೇಶ ಮಾಡಿ ``ಆದಿ ದ್ರಾವಿಡ'' ಎಂದು ಜಾತಿ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದೆ. ಆದರೆ ಕೊಡಗು ಜಿಲ್ಲೆಯಲ್ಲಿರುವ ತುಳು ಭಾಷಿಕ ಆದಿ ದ್ರಾವಿಡ ಜನಾಂಗದವರಿಗೆ ಇಲ್ಲಿಯವರೆಗೆ ಪರಿಶಿಷ್ಟ ಜಾತಿ ``ಆದಿ ದ್ರಾವಿಡ'' ಎಂದು ಜಾತಿ ಪ್ರಮಾಣಪತ್ರ ದೊರೆತ್ತಿಲ್ಲ. ಶೇ.5 ಮಂದಿಗೆ ಮಾತ್ರ ಪ್ರಮಾಣಪತ್ರ ದೊರೆತಿದ್ದು ಉಳಿದವರು ಗೊಂದಲದಲ್ಲಿ ಇದ್ದಾರೆ.
ಕೊಡಗು ಸೇರಿದಂತೆ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಕುಂದಾಪುರ ವ್ಯಾಪ್ತಿಯಲ್ಲಿ ಸಮುದಾಯದ ಸುಮಾರು 9 ಲಕ್ಷ ಜನರಿದ್ದು, `ಆದಿ ದ್ರಾವಿಡ' ಸಮೂಹ ಜಾತಿ ಪ್ರಮಾಣ ಪತ್ರದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದೆ. ಏಕರೂಪದ `ಆದಿ ದ್ರಾವಿಡ' ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕು.
ತಪ್ಪಾಗಿ ಜಾತಿ ನಮೂದು ಮಾಡುತ್ತಿರುವುದರಿಂದ ಆದಿದ್ರಾವಿಡ ಜನಾಂಗದ ಮಕ್ಕಳಿಗೆ ಶಾಲೆಗಳಲ್ಲಿ ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ. ವಿವಾಹ ಸಂಬAಧಗಳಿಗೆ ತುಂಬಾ ತೊಂದರೆಯಾಗುತ್ತಿದೆ ಮತ್ತು ಆದಿದ್ರಾವಿಡ ಸಮುದಾಯ ಸೌಲಭ್ಯದಿಂದ ವಂಚಿತವಾಗುತ್ತಿದೆ ಎಂದರು.
ಸಂಘದ ಜಿಲ್ಲಾಧ್ಯಕ್ಷ ಪಿ.ಎಲ್. ಸುರೇಶ್, ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಮಧು, ಮಡಿಕೇರಿ ತಾಲೂಕು ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ಮಕ್ಕಂದೂರು, ವಿರಾಜಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ಎ. ಲಲಿತಾ ಹಾಗೂ ಮಾದಾಪುರ ಘಟಕದ ಸದಸ್ಯ ರವಿ ಮಕ್ಕಂದೂರು ಸುದ್ದಿಗೋಷ್ಠಿಯಲ್ಲಿ ಇದ್ದರು.